ರಾಮನಗರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾಲು ಸಾಲು ಪ್ರಕರಣಗಳು ಪತ್ತೆಯಾಗುತ್ತಿವೆ. ರಾಮನಗರದಲ್ಲಿ ಇಂದು ಒಂದೇ ದಿನ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ರಾಮನಗರದ ಭೈರಮಂಗಲ ಗ್ರಾಮದ ಯುವತಿಯಲ್ಲಿ ಕೋವಿಡ್ ಸೋಂಕು ಪತ್ತೆ ಬೆನ್ನಲ್ಲೇ ಇದೀಗ ಬಿಡದಿ ಮೂಲದ ವ್ಯಕ್ತಿಯಲ್ಲಿಯೂ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ರಾಮನಗರದ ಭೈರಮಂಗಲ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ನಿನ್ನೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇಂದು ಜಿಲ್ಲೆಯಲ್ಲಿ ನಡೆಸಿದ ಕೋವಿಡ್ ಟೆಸ್ಟಿಂಗ್ ವೇಳೆ ಮತ್ತೆ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ವ್ಯಾಪಕವಾಗಿ ಹರಡಿರುವ ಬಗ್ಗೆ ಆತಂಕ ಶುರುವಾಗಿದೆ.