ಏಪ್ರಿಲ್ 10ರಂದು ಶ್ರೀರಾಮನವಮಿ ನಿಮಿತ್ತ ಹಾಗೂ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ / ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಬಾರ್ ಅಂಡ್ ರೆಸ್ಟೋರೆಂಟ್, ಮಾಂಸಾಹಾರಿ ಹೋಟೆಲ್ ಗಳಲ್ಲೂ ಮಾಂಸಹಾರ ಮಾರಾಟ ನಿಷೇಧಿಸಲಾಗಿದ್ದು, ಮಾಂಸ ಮಾರಾಟ ಮಳಿಗೆಗಳನ್ನು ತೆರೆಯದಂತೆ ಸೂಚಿಸಲಾಗಿದೆ.
15 ನೇ ಮಹಡಿಯಿಂದ ನೇತಾಡಿದ್ದರ ಆಘಾತಕಾರಿ ಘಟನೆ ಬಿಚ್ಚಿಟ್ಟ ಯಜುವೇಂದ್ರ ಚಹಾಲ್…!
ಒಂದು ವೇಳೆ ಆದೇಶವನ್ನು ಉಲ್ಲಂಘಿಸಿದರೆ ಅಂತಹ ವ್ಯವಹಾರಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಭದ್ರಾವತಿ ನಗರಸಭೆ ಪೌರಾಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.