ಅಯೋಧ್ಯೆ : ರಾಮಮಂದಿರದಲ್ಲಿ ಇಂದು 2 ಗಂಟೆಯಿಂದ ಮತ್ತೆ ರಾಮನ ದರ್ಶನ ಪುನಾರಂಭವಾಗಿದ್ದು, ಮತ್ತೆ ನೂಕು ನುಗ್ಗಲು ಶುರುವಾಗಿದೆ.
ಅಯೋಧ್ಯೆ ರಾಮ ಮಂದಿರದಲ್ಲಿ ಇಂದು ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ಆದರೆ ಭಾರಿ ನೂಕು ನುಗ್ಗಲು ಉಂಟಾದ ಹಿನ್ನೆಲೆ ಮಧ್ಯಾಹ್ನ 2 ಗಂಟೆವರೆಗೆ ಸ್ಥಗಿತಗೊಳಿಸಲಾಗಿತ್ತು, ಇದೀಗ ಮಧ್ಯಾಹ್ನ 2 ಗಂಟೆಯ ನಂತರ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರದ ಮೊದಲ ದಿನ ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀ ರಾಮ್ ಲಲ್ಲಾ ದರ್ಶನ ಪಡೆಯಲು ಭಕ್ತರು ಮುಂಜಾನೆ 3 ಗಂಟೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಗಂಟೆಗಟ್ಟಲೆ ಸಾಲಿನಲ್ಲಿ ಕಾಯುತ್ತಿರುವ ಭಕ್ತರ ಭಾರಿ ದಟ್ಟಣೆಯಿಂದಾಗಿ ಅಯೋಧ್ಯೆ ರಾಮ ಮಂದಿರಕ್ಕೆ ಪ್ರವೇಶವನ್ನು ಮುಚ್ಚಲಾಗಿತ್ತು. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪ್ರವೇಶವನ್ನು ತಾತ್ಕಾಲಿಕವಾಗಿ ಮುಚ್ಚಿದ್ದರು.
ಕೋಟ್ಯಾಂತರ ಭಕ್ತರ ಕನಸು ನನಸಾಗಿದ್ದು, ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ನಿನ್ನೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ ಯಜಮಾನನಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಮೂಲಕ ಇಂದಿನಿಂದ ಭಕ್ತರು ಬಾಲರಾಮನ ದರ್ಶನಕ್ಕೆ ಮುಗಿ ಬಿದ್ದಿದ್ದಾರೆ.