alex Certify BIG BREAKING: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯಗೆ ಪಶ್ಚಾತ್ತಾಪ: ರಂಭಾಪುರಿ ಶ್ರೀ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯಗೆ ಪಶ್ಚಾತ್ತಾಪ: ರಂಭಾಪುರಿ ಶ್ರೀ ಹೇಳಿಕೆ

ಚಿಕ್ಕಮಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಪಶ್ಚಾತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ನನ್ನನ್ನು ದಾರಿ ತಪ್ಪಿಸಿದ್ದರು. ನನಗೆ ಪಶ್ಚಾತ್ತಾಪವಾಗಿದೆ ಎಂದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ಹೇಳಿದ್ದಾರೆ.

ಬಾಳೆಹೊನ್ನೂರು ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಟ್ಟಮೊದಲ ಬಾರಿಗೆ ಭೇಟಿ ನೀಡಿದ್ದರು. ಸಿದ್ದರಾಮಯ್ಯ ಬಂದು ಹೋದ ಬಳಿಕ ಮಾತನಾಡಿದ ಶ್ರೀಗಳು, ಪೀಠಕ್ಕೆ ಬಂದು ಆಶೀರ್ವಾದ ಪಡೆಯುವುದು ಅವರ ಬಯಕೆಯಾಗಿತ್ತು. ವೀರಶೈವ ಲಿಂಗಾಯತ ಧರ್ಮ ಒಡೆಯಲು ಪ್ರಯತ್ನಿಸಿರಲಿಲ್ಲ. ಆದರೆ, ಕೆಲವರು ನನ್ನನ್ನು ದಾರಿ ತಪ್ಪಿಸಿದರು. ಆ ವಿಚಾರದಲ್ಲಿ ಖಂಡಿತವಾಗಿಯೂ ಪಶ್ಚಾತಾಪವಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...