ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪತ್ರ ಬರೆದ ನಂತರ, ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆಯನ್ನು ಬಾಬಾರಾಮದೇವ್ ಪಡೆದುಕೊಂಡಿದ್ದಾರೆ.
ಅಲೋಪತಿ ಅವೈಜ್ಞಾನಿಕ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಬಾ ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತ್ತು.
ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು, ಕೊರೋನಾ ವಿರುದ್ಧದ ಹೋರಾಟದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರಾದ ಕೊರೋನಾ ಯೋಧರನ್ನು ಅಗೌರವಗೊಳಿಸುವ ಮೂಲಕ ಅವರ ಭಾವನೆಗೆ ಘಾಸಿಯಾಗಿದೆ. ಹೀಗಾಗಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಪತ್ರ ಬರೆದಿದ್ದರು.
ಇದಾದ ಬಳಿಕ ತಮ್ಮ ಹೇಳಿಕೆಯನ್ನು ಬಾಬಾ ರಾಮ್ ದೇವ್ ಹಿಂಪಡೆದುಕೊಂಡಿದ್ದಾರೆ. ಅಲೋಪತಿ ಅವೈಜ್ಞಾನಿಕ ಎಂದು ನೀಡಿದ ವಿವಾದಿತ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ.