ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ನಡೆದಿದೆ. ದೇಶದಾದ್ಯಂತ ರಾಮಭಕ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದು, ಈ ಸಾರ್ಥಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಇದರ ಮಧ್ಯೆ ಛತ್ತೀಸ್ಗಡ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದ್ದು, ರಾಮಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರ ಆ ದಿನವನ್ನು ರಾಜ್ಯದಲ್ಲಿ ಪಾನಮುಕ್ತ ದಿನ ಎಂದು ಘೋಷಿಸಲು ನಿರ್ಧರಿಸಲಾಗಿದೆ.
ಛತ್ತೀಸ್ಗಡ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಈ ವಿಷಯವನ್ನು ತಿಳಿಸಿದ್ದು, ಛತ್ತೀಸ್ಗಡ, ಶ್ರೀರಾಮನ ತಾಯಿಯ ತವರು ಆಗಿರುವುದು ನಮ್ಮ ಅದೃಷ್ಟ. ಜನವರಿ 22ರ ದಿನವನ್ನು ರಾಜ್ಯದ ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಹಾಗೂ ಎಲ್ಲಾ ಕಡೆ ಹಣತೆಗಳನ್ನು ಬೆಳಗಿಸಲಾಗುತ್ತದೆ ಎಂದಿದ್ದಾರೆ.