ಬೆಂಗಳೂರು: ಜಲಸಂಪನ್ಮೂಲ ಖಾತೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಆದರೆ, ಇದನ್ನು ಅಲ್ಲಗಳೆದಿರುವ ಬಾಲಚಂದ್ರ ಜಾರಕಿಹೊಳಿ, ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋದರನ ಪರವಾಗಿ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ ಅವರು, ರಮೇಶ್ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನವನ್ನು ನನಗೆ ಕೊಡುವ ಕುರಿತಾಗಿ ಯಾವುದೇ ಚರ್ಚೆಯಾಗಿಲ್ಲ. ನೈತಿಕ ಹೊಣೆಹೊತ್ತು ರಮೇಶ್ ರಾಜೀನಾಮೆ ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆಗೆ ಮನವಿ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಸಚಿವ ಸ್ಥಾನವನ್ನು ಜಾರಕಿಹೊಳಿ ಕುಟುಂಬಕ್ಕೆ ನೀಡಬೇಕೆಂಬ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಜಲಸಂಪನ್ಮೂಲ ಸಚಿವ ಸ್ಥಾನ ನೀಡುವ ಕುರಿತಾಗಿಯೂ ಯಾವುದೇ ಚರ್ಚೆಯಾಗಿಲ್ಲ. ಮುಂದೆ ನೋಡೋಣ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.