ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಲು ನಾನೇ ಕಾರಣ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಂಕಲ್ಪ ಮಾಡಲಾಗುವುದು. ಗ್ರಾಮಾಂತರ ಕ್ಷೇತ್ರದ ಟಿಕೆಟ್ ಗೆ ಬಹಳಷ್ಟು ಜನ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಿದ್ದಾರೆ.
ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಪಕ್ಷದ ಚಿಹ್ನೆಯ ಮೇಲೆ ನಡೆಯಲಿದೆ ನಡೆಯುತ್ತದೆ. ಹೊಸ ಕಾರ್ಯಕರ್ತರು ಬರುತ್ತಾರೆ ಎಂದು ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.