alex Certify ಮಹೇಶ ಕುಮಟಳ್ಳಿ, ಶ್ರೀಮಂತ್ ಪಾಟೀಲ್ ಸೇರಿ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹೇಶ ಕುಮಟಳ್ಳಿ, ಶ್ರೀಮಂತ್ ಪಾಟೀಲ್ ಸೇರಿ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ

ಅಥಣಿ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಶಾಸಕ ಮಹೇಶ ಕುಮಟಳ್ಳಿ ಅವರ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ನನಗೆ ವಿಶ್ವಾಸವಿದೆ. ಮಹೇಶ್ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಗ್ರಾಮದಲ್ಲಿ ಅವರು ಮಾತನಾಡಿದರು. ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಶ್ರೀಮಂತ ಪಾಟೀಲ್ ಸೇರಿದಂತೆ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್ ಸಿಗುತ್ತದೆ. ಬಿಜೆಪಿ ಸೇರಿದ ಎಲ್ಲರಿಗೂ ಹೈಕಮಾಂಡ್ ಆಶೀರ್ವಾದ ಮಾಡುತ್ತದೆ ಎಂದು ಹೇಳಿದ್ದಾರೆ.

ಲಕ್ಷ್ಮಣ ಸವದಿ ಏಕೆ ಹತಾಶರಾಗಿ ಮಾತನಾಡುತ್ತಿದ್ದರೋ ಅರ್ಥವಾಗುತ್ತಿಲ್ಲ. ನಾನು ಹಾಗೂ ಲಕ್ಷ್ಮಣ ಸವದಿ ಸಣ್ಣ ಗಿಡ. ರಾಷ್ಟ್ರೀಯ ನಾಯಕರು ಹೆಮ್ಮರ. ಅವರು ನಿರ್ಣಯ ಮಾಡುತ್ತಾರೆ. ಯಾಕೆ ಇಷ್ಟು ಚಡಪಡಿಸುತ್ತಿದ್ದೀಯಾ ಲಕ್ಷ್ಮಣ ಅಣ್ಣ ಆರಾಮಾಗಿರು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...