ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿ.ಡಿ. ಪ್ರಕರಣದ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ವಿಚಾರಣಾ ನ್ಯಾಯಾಲಯಕ್ಕೆ ಸಿ.ಡಿ. ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಸಿ.ಡಿ. ಪ್ರಕರಣದ ತನಿಖೆಯ ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ಥಿ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಮಾನ್ಯ ಮಾಡಿದ್ದು, ವರದಿ ಸಲ್ಲಿಸಲು ಆದೇಶ ನೀಡಿದೆ.