ಬೆಂಗಳೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇಲೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
ಯುವತಿ ಪರವಾಗಿ ದೂರು ನೀಡಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇನ್ನೂ ಕೆಲವು ರಾಜಕಾರಣಿಗಳು, ನಾಯಕರ ಸಿಡಿಗಳು ಇರುವ ಮಾಹಿತಿ ಇದೆ. ಸಮಯ ಸಂದರ್ಭ ಬಂದಾಗ ಅವುಗಳನ್ನು ಬಹಿರಂಗಪಡಿಸಲಾಗುವುದು. ಇನ್ನೂ ಹಲವು ನಾಯಕರ ಕುರಿತು ದೂರು ಸಲ್ಲಿಸುವುದಾಗಿ ಹೇಳಿದ್ದಾರೆ.