alex Certify ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ.

ರಮೇಶ್ ಜಾರಕಿಹೊಳಿ ಅವರನ್ನು ಅವಮಾನಿಸಲು ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು ಬಂಧಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

ದೂರು ಸಲ್ಲಿಸಿದ ನಂತರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು, ರಮೇಶ ಜಾರಕಿಹೊಳಿಯವರ ಮನೆ ಗೋಡೆಗೆ ಪೋಸ್ಟರ್ ಅಂಟಿಸಿದ ಕೃತ್ಯದ ಹಿಂದೆ ಯಾರೋ ದೊಡ್ಡ ನಾಯಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ಪೋಸ್ಟರ್ ಅಂಟಿಸಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮೊದಲಾದವರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...