alex Certify ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಮ್ಮನ್ನು ಮೂಲೆಯಲ್ಲಿ ಕೂರಿಸಿದ್ದರು. ಈಗ ಬಿಜೆಪಿಯಲ್ಲಿ ಖುಷಿಯಿಂದ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಗೆ ಬಂದಿರುವ ನಾವು 17 ಶಾಸಕರು ಗಟ್ಟಿಯಾಗಿರುತ್ತೇವೆ ಎಂದು ಹೇಳಿದ್ದಾರೆ.

ನಾನು ಮನಸ್ಸು ಮಾಡಿದರೆ ಐವರು ಕಾಂಗ್ರೆಸ್ ಶಾಸಕರನ್ನು 24 ಗಂಟೆಯೊಳಗೆ ರಾಜೀನಾಮೆ ಕೊಡಿಸುತ್ತೇನೆ. ದೊಡ್ಡ ದೊಡ್ಡ ನಾಯಕರು ಕೂಡ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ಅವರ ಹೆಸರನ್ನು ಹೇಳಿದರೆ ಗಾಬರಿಯಾಗುತ್ತೀರಿ. ಅಂತಹ ದೊಡ್ಡ ನಾಯಕರನ್ನು ಬಿಜೆಪಿಗೆ ಕರೆತರುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...