ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾತ್ರವಲ್ಲದೆ, ಮತ್ತೊಬ್ಬ ಜನಪ್ರತಿನಿಧಿ ಕೂಡ ಯುವತಿಯ ಬಲೆಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಮತ್ತೊಬ್ಬ ನಾಯಕ ಕೂಡ ಯುವತಿಯ ಜಾಲಕ್ಕೆ ಬಿದ್ದಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗಿಂತ ಮೊದಲೇ ಮತ್ತೊಬ್ಬ ಪ್ರಬಲ ನಾಯಕ ಯುವತಿಯೊಂದಿಗೆ ಸಂಪರ್ಕದಲ್ಲಿದ್ದರು. ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಾಳೆನ್ನಲಾಗಿದೆ. ಮಾಜಿ ಸಚಿವ ಸುಧಾಕರ್ ಅವರು ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.