alex Certify ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಈ ಮಹಾನುಭಾವ: ರಮೇಶ ಜಾರಕಿಹೊಳಿ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಈ ಮಹಾನುಭಾವ: ರಮೇಶ ಜಾರಕಿಹೊಳಿ ಬಾಂಬ್

ಬೆಳಗಾವಿ: ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದೇ ಲಕ್ಷ್ಮಣ ಸವದಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ.

ಅಥಣಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿ ಮಾಡುವ ಮನಸ್ಸು ಇರಲಿಲ್ಲ. ಪಕ್ಷದ ಹಿರಿಯ ಮುಖಂಡರ ಸಹಾಯ ಪಡೆದುಕೊಂಡ ಸವದಿ ಉಪಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದ. ನಂತರ ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ತಂದಿದ್ದೆ ಈ ಮಹಾನುಭಾವ ಎಂದು ಹೇಳಿದ್ದಾರೆ.

ಬಿಜೆಪಿ ವರಿಷ್ಠರಿಗೆ ಯಡಿಯೂರಪ್ಪನವರ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಹೇಳುವಲ್ಲಿ ಲಕ್ಷ್ಮಣ ಸವದಿ ಪ್ರಮುಖ ಪಾತ್ರ ವಹಿಸಿದ್ದ. ಈ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿಯನ್ನು ಸೋಲಿಸಿ ಮನೆಗೆ ಕಳುಹಿಸಲು ನಾನು ಸಿದ್ಧವಾಗಿದ್ದೇನೆ ಎಂದು ಜಾರಕಿಹೊಳಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...