alex Certify ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮಾಂತರ ಕ್ಷೇತ್ರ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕೀಯದಲ್ಲಿ ಇದೆಲ್ಲ ಸಹಜ. ಅದನ್ನು ನಿಭಾಯಿಸುವ ಶಕ್ತಿ ನನಗಿದೆ ಎಂದು ಹೇಳಿದ್ದಾರೆ.

ಪಿಡಿಓಗಳ ಮಟ್ಟಕ್ಕೆ ಇಳಿದು ರಾಜಕಾರಣ ಮಾಡುವ ಅವಶ್ಯಕತೆ ಇರಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಾನು ರಾಮನ ಭಕ್ತೆ. ರಾಮಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿರುವವರಿಂದ ಒಬ್ಬ ಮಹಿಳೆ ಬಗೆಗಿನ ಮಾತುಗಳ ಬಗ್ಗೆ ರಾಜ್ಯದ ಜನರು ನೋಡಿದ್ದಾರೆ. ಅವರು ನನ್ನ ಬಗ್ಗೆ ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್ ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...