ಬೆಳಗಾವಿ: ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಇದರ ಬೆನ್ನಲ್ಲೇ ಅಲರ್ಟ್ ಆಗಿರುವ ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರಚಾರ ಮತ್ತು ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರಗಳ ಕುರಿತಾಗಿ ಸಮಾಲೋಚನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶೆಟ್ಟರ್ ಅವರನ್ನು ಗೆಲ್ಲಿಸಲು ಪಣತೊಟ್ಟಿರುವ ರಮೇಶ್ ಜಾರಕಿಹೊಳಿ ಒಂದೂವರೆ ಗಂಟೆ ಕಾಲ ಚುನಾವಣೆ ತಂತ್ರಗಾರಿಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸೋಮವಾರದಿಂದ ಭರ್ಜರಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಪ್ರಯತ್ನಿಸಿದ್ದ ರಮೇಶ್ ಜಾರಕಿಹೊಳಿ ವಿಫಲರಾಗಿದ್ದರು. ಈಗ ಲೋಕಸಭೆ ಚುನಾವಣೆಯಲ್ಲಿ ಅವರ ಪುತ್ರನ ಸೋಲಿಸಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.