ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತರಿಗೆ ಸಿಡಿ ಸಲ್ಲಿಸಿ ದೂರು ನೀಡಲಾಗಿದೆ.
ವಿಡಿಯೋದಲ್ಲಿರುವ ಯುವತಿಗೆ ಬೆದರಿಕೆ ಹಾಕಲಾಗಿದೆ. ಆಕೆಯ ಕುಟುಂಬದವರಿಗೂ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.