alex Certify ಪ್ರಭಾವಿ ಸಚಿವರ’ ರಾಸಲೀಲೆ ವಿಡಿಯೋ ಬಹಿರಂಗ: ಕೆಲಸದ ಹೆಸರಲ್ಲಿ ಲೈಂಗಿಕವಾಗಿ ಬಳಸಿಕೊಂಡ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಭಾವಿ ಸಚಿವರ’ ರಾಸಲೀಲೆ ವಿಡಿಯೋ ಬಹಿರಂಗ: ಕೆಲಸದ ಹೆಸರಲ್ಲಿ ಲೈಂಗಿಕವಾಗಿ ಬಳಸಿಕೊಂಡ ಆರೋಪ

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದಾರೆ. ತನ್ನನ್ನು ಲೈಂಗಿಕವಾಗಿ ಬಳಸಿಕೊಂಡ ಬಗ್ಗೆ ಯುವತಿ ಸಿಡಿ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಕೆಲಸ ಕೊಡಿಸದೆ ನಿರಾಕರಿಸಿ ಬೆದರಿಕೆ ಹಾಕಿದಾಗ ಆಕೆಯ ಬಳಿ ಸಿಡಿ ಇರುವುದು ಗೊತ್ತಾಗಿ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. ಇದರಿಂದ ಕಂಗಾಲಾದ ಯುವತಿ ನಾಗರಿಕ ಹಕ್ಕು ಹೋರಾಟ ಸಮಿತಿಯ ದಿನೇಶ್ ಕಲ್ಲಹಳ್ಳಿ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಈ ಸಿಡಿ ಬಗ್ಗೆ ತನಿಖೆ ಕೈಗೊಂಡು, ಬೆದರಿಕೆ ಹಿನ್ನೆಲೆಯಲ್ಲಿ ಯುವತಿಗೆ ರಕ್ಷಣೆ ಒದಗಿಸಿ ಎಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ತನಿಖೆಯ ನಂತರ ಸತ್ಯಾಸತ್ಯತೆ ಬಯಲಾಗಲಿದೆ. ಕೆಪಿಟಿಸಿಎಲ್ ನಲ್ಲಿ ನೌಕರಿ ಕೊಡಿಸುವುದಾಗಿ ಆಮಿಷ ಒಡ್ಡಿ ಯುವತಿಯನ್ನು ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ. ಹಲವು ಬಾರಿ ಆಕೆಯನ್ನು ಬಳಸಿಕೊಂಡಿದ್ದಾರೆ ಎಂದು ರಾಸಲೀಲೆ ವಿಡಿಯೋ ಬಗ್ಗೆ ದೂರು ನೀಡಿದ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ಸಿಡಿ ಬಿಡುಗಡೆ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕೆಗೆ ಬೆದರಿಕೆ ಹಾಕಲಾಗಿತ್ತು ಎಂದು ಪೊಲೀಸ್ ಆಯುಕ್ತರ ಕಚೇರಿ ಬಳಿ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...