ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ರಣತಂತ್ರ ಹೆಣೆದಿದ್ದು, ದಿನದಿನಕ್ಕೂ ಅವರ ನಡೆ ಕುತೂಹಲ ಮೂಡಿಸಿದೆ.
ರಾಜಕೀಯ ಮುಖಂಡರು, ಮಠಾಧೀಶರು, ಆರೆಸ್ಸೆಸ್ ಮುಖಂಡರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಎರಡು, ಮೂರು ದಿನದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ರಾಜೀಯಾಗುತ್ತಾರೆಯೇ? ಇಲ್ಲವೇ ರಾಜೀನಾಮೆ ಕೊಡುತ್ತಾರೆಯೇ ಎನ್ನುವುದು ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಪ್ರಮುಖರಾಗಿದ್ದ ರಮೇಶ್ ಜಾರಕಿಹೊಳಿ ಸರ್ಕಾರಕ್ಕೇ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ. ಬಾಂಬೆ ಫ್ರೆಂಡ್ಸ್ ಜೊತೆ ಸೇರಿ ಮತ್ತೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾರೆಯೇ ಎಂದೆಲ್ಲಾ ಚರ್ಚೆಯಾಗ್ತಿದೆ ಎನ್ನಲಾಗಿದೆ.
ಎರಡು ಮೂರು ದಿನದಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಏಳಬಹುದಾದ ಸಾಧ್ಯತೆಯಿದೆ. ಸಾಹುಕಾರ್ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಶೀಘ್ರದಲ್ಲೇ ಅವರು ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರನ್ನೂ ಭೇಟಿಯಾಗಲಿದ್ದಾರೆ. ಇನ್ನು ಎರಡು-ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ ನಾಯಕರನ್ನು ಭೇಟಿಯಾಗಿ ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.
ಸಚಿವ ಸ್ಥಾನಕ್ಕಾಗಿ ಒತ್ತಡ ತಂತ್ರದ ಮೊರೆ ಹೋಗಿರುವ ಸಾಹುಕಾರ್ ಮಂತ್ರಿಗಿರಿ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಹೋದರರ ಸಲಹೆಯಂತೆ ಮುಂದಿನವಾರ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.