alex Certify ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿಗೆ ನೋಟಿಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಿನೇಶ್ ಕಲ್ಲಹಳ್ಳಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ.

ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...