ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.
ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ರಮೇಶ್ ಜಾರಿಹೊಳಿ ವಿರುದ್ಧ ದೂರು ನೀಡಲಾಗಿದ್ದು, ವಿಡಿಯೋ ಕೂಡ ಬಹಿರಂಗವಾದ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.