alex Certify BIG NEWS: ದೆಹಲಿ ತಲುಪಿದ ಸೆಕ್ಸ್ ಸಿಡಿ: ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಸೂಚನೆ..? ಅನಿವಾರ್ಯತೆಗೆ ಸಿಲುಕಿದ ಸಿಎಂ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ತಲುಪಿದ ಸೆಕ್ಸ್ ಸಿಡಿ: ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಸೂಚನೆ..? ಅನಿವಾರ್ಯತೆಗೆ ಸಿಲುಕಿದ ಸಿಎಂ BSY

ರಾಜ್ಯದ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಇಲ್ಲಿ ಬಯಲಾಗುವ ಮೊದಲೇ ದೆಹಲಿಯನ್ನು ತಲುಪಿದೆ. ರಾಜ್ಯದ ಪ್ರಭಾವಿ ಸಚಿವರೊಬ್ಬರ ಮೂಲಕ ಸಿಡಿ ದೆಹಲಿಗೆ ರವಾನೆಯಾಗಿದೆ.

ಬಿಜೆಪಿ ವರಿಷ್ಠರಿಗೆ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ತಲುಪಿದ್ದು, ಈ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

ಅಧಿವೇಶನದ ಹೊತ್ತಿನಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳಲು ಅಧಿವೇಶನದಿಂದ ರಮೇಶ್ ಜಾರಕಿಹೊಳಿ ದೂರ ಉಳಿಯುವ ಸಾಧ್ಯತೆಯಿದೆ. ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವಂತೆ ಸೂಚಿಸಬಹುದು. ವರಿಷ್ಠರು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ರಾಜೀನಾಮೆಗೆ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದ್ದು, ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಆಪ್ತರೊಂದಿಗೆ ಚರ್ಚಿಸಿದ ಸಿಎಂ ರಾಜೀನಾಮೆ ಪಡೆಯುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮತ್ತು ಪ್ರಭಾವಿ ಸಚಿವರಾಗಿರುವ ಅಲ್ಲದೆ, ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಉತ್ತಮ ಸಂಪರ್ಕ ಹೊಂದಿರುವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ರಾಜ್ಯ ರಾಜಕೀಯದಲ್ಲಿ ಹಲ್ಚಲ್ ಸೃಷ್ಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...