alex Certify ಸೆಕ್ಸ್ ಸಿಡಿ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೆಚ್ಚಿದ ಒತ್ತಡ –ಶಿವಮೊಗ್ಗ, ಬೆಂಗಳೂರಿನಲ್ಲಿ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕ್ಸ್ ಸಿಡಿ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೆಚ್ಚಿದ ಒತ್ತಡ –ಶಿವಮೊಗ್ಗ, ಬೆಂಗಳೂರಿನಲ್ಲಿ ಪ್ರತಿಭಟನೆ

ಸಚಿವ ಸಂಪುಟದಿಂದ ರಮೇಶ್ ಜಾರಕಿಹೊಳಿ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಬೆಂಗಳೂರು, ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಕೆ. ರಂಗನಾಥ್, ಪ್ರವೀಣ್, ಕಿರಣ್ ಮೊದಲಾದವರು ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...