
ಬೆಳಗಾವಿ: ರಮೇಶ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಆತ ಬೆಳೆಯುವುದನ್ನು ಸಹಿಸಿಕೊಳ್ಳುವುದಕ್ಕೆ ಅವರ ಪಕ್ಷದವರಿಗೆ ಆಗಲಿಲ್ಲ ಎಂದು ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಜಕೀಯದಲ್ಲಿ ರಮೇಶ್ ಬಹಳಷ್ಟು ಬದಲಾಗಬೇಕಿದೆ. ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ, ಜನರು ಬಹಳ ಮುಖ್ಯ. ಅವರು ನಿನ್ನೆಯೇ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ಕೊಟ್ಟಿದ್ದರೆ ಮುಗಿಯುತ್ತಿತ್ತು. ದೇಶದಲ್ಲಿ ಇಂತಹ ಘಟನೆಗಳು ಹೊಸದೇನೂ ಅಲ್ಲ. ಪಕ್ಷವೇ ಬೇರೆ, ಜಾರಕಿಹೊಳಿ ಕುಟುಂಬವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.