alex Certify BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ.

ಡಿಕೆಶಿ ಆಗಮನದ ಸುದ್ದಿ ತಿಳಿದು ಮೊದಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರಮೇಶ್ ಬೆಂಬಲಿಗರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಮಾನನಿಲ್ದಾಣದಿಂದ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಜೊತೆ ವಾಹನದಲ್ಲಿ ತೆರಳುವಾಗ ಅವರ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಲಾಗಿದೆ. ಅವರ ವಾಹನಗಳನ್ನು ತಡೆಯಲು ರಮೇಶ್ ಬೆಂಬಲಿಗರು ಮುಂದಾಗಿದ್ದು, ಪೊಲೀಸರು ಅವಕಾಶ ನೀಡಿದ್ದಾಗ ಕಲ್ಲು ತೂರಿದ್ದಾರೆ. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಕರ್ತನ ಮೇಲೆ ಲಾಠಿ ಬೀಸಿದ ಪೊಲೀಸರ ವಿರುದ್ಧ ರಮೇಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...