ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಎಂಎಲ್ ಸಿ ಸಿ.ಪಿ.ಯೋಗೇಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ವಲಸಿಗ ಶಾಸಕರು ಮರಳಿ ಕಾಂಗ್ರೆಸ್ ಸೇರ್ಪಡೆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ನಡುವೆಯೇ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 17 ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಳಿಸಿದ್ದರು. ಬಳಿಕ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದರು. ಅಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರು ಈಗ ಬಿಜೆಪಿ ತೊರೆಯಲು ಮುಂದಾಗಿದ್ದು, ಮರಳಿ ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.