ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಬಂಧನಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಈ ನಡುವೆ ಕೆಲ ಮಹತ್ವದ ವಿಷಯ ಲಭ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಕೆಲ ಅನುಮಾನಾಸ್ಪದ ವ್ಯಕ್ತಿಗಳನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕೆಲ ಮಹತ್ವದ ವಿಷಯಗಳು ನಮಗೆ ದೊರೆತಿವೆ. ಅವುಗಳ ಆಧಾರದ ಮೇಲೆ ತನಿಖೆ ಮುಂದುವರೆದಿದೆ. ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 1ರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು. ಮೂವರ ಸ್ಥಿತಿ ಗಂಭೀರವಾಗಿತ್ತು. ಕೆಲ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಮುಂದುವರೆದಿದೆ.