
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ.
ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶಂಕಿತರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.
ಇನ್ನು ಶಿವಮೊಗ್ಗದ ತೀರ್ಥಹಳ್ಳಿಯ ಸೊಪ್ಪುಗುಡ್ದೆ, ಬೆಟಮಕ್ಕಿ, ಇಂದಿರಾನಗರದಲ್ಲಿ ದಾಳಿ ನಡೆಸಿದೆ. ಇದೇ ವೇಳೆ ತಮಿಳುನಾಡಿನ ಚೆನ್ನೈ ನಲ್ಲಿಯೂ ದಾಳಿ ನಡೆಸಲಾಗಿದ್ದು, ಇನ್ನಷ್ಟು ಶಂಕಿತರಿಗೆ ಶೋಧ ನಡೆಸಲಾಗಿದೆ.