ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಪೋಟದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ಕರ್ನಾಟಕದ ಗೌರವವನ್ನು ಹಾಳು ಮಾಡುತ್ತಿದ್ದಾರೆ. ಬೆಂಗಳೂರು ಗೌರವದ ಜೊತೆಗೆ ಬಿಜೆಪಿಯವರ ಗೌರವವೂ ಹಾಳಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.