
ಬೆಂಗಳೂರು: ಬೆಂಗಳೂರು ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದ ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಶಂಕಿತ ಉಗ್ರ ಮುಸಾವಿರ್ ನನ್ನು ಕರೆತಂದು ಸ್ಥಳ ಮಹಜರು ನಡೆಸಲಾಗಿದೆ. ಘಟನೆಯನ್ನು ಮರುಸೃಷ್ಟಿಸಿ ಮಹಜರು ನಡೆಸಲಾಗಿದೆ. ಇನ್ನು ಸ್ಥಳ ಮಹಜರು ಹಿನ್ನೆಲೆಯಲ್ಲಿ ಸಂಜೆ 4:30ರ ವರೆಗೆ ರಾಮೇಶ್ವರಂ ಕೆಫೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.
ಮಾರ್ಚ್ 1 ರಂದು ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. 5 ತಿಂಗಳ ನಂತರ ಆರೋಪಿ ಕರೆತಂದು ಸ್ಥಳ ಮಹಜರು ನಡೆಸಲಾಗಿದೆ.
