ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಬಾಂಬ್ ಸ್ಪೋಟ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಅವರು, ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಚಿಕಿತ್ಸೆಯ ಮಾಹಿತಿ ಪಡೆದುಕೊಂಡರು.