ಮೈಸೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಸ್ಪೋಟ ಹೇಗೆ ಆಯಿತು..? ಇದಕ್ಕೆ ಕಾರಣ ಏನು…? ಎಂಬುದು ತಿಳಿದಿಲ್ಲ. ನಾನು ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ, ನನಗೆ ಬಂದಿರುವ ಮಾಹಿತಿ ಪ್ರಕಾರ ಮಧ್ಯಾಹ್ನ 12 ಗಂಟೆ ವೇಳೆಗೆ ಈ ಸ್ಪೋಟ ನಡೆದಿದೆ.
ಎಲ್ಲ ಕಾಲದಲ್ಲಿಯೂ ಇಂತಹ ಘಟನೆಗಳು ನಡೆಯುತ್ತಿದೆ… ನಡೆಯಬಾರದು..! ನಮ್ಮ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಇಂತಹ ಘಟನೆ ನಡೆದಿದೆ. ಉನ್ನತ ಮಟ್ಟದ ತನಿಖೆ ನಡೆಸಲು ಕ್ರಮ ಕೈಗೊಳ್ಳುತ್ತೇವೆ, ಗೃಹ ಸಚಿವ ಪರಮೇಶ್ವರ್ ಅವರಿಂದ ಮಾಹಿತಿ ಪಡೆಯುತ್ತಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.