ಬೆಂಗಳೂರು : ನಾನು, ಸಿಎಂ, ಡಿಸಿಎಂ ಕೊಡುವ ಹೇಳಿಕೆ ಮಾತ್ರ ಅಧಿಕೃತ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಈ ಬಗ್ಗೆ ಸಚಿವ ಶರಣಪ್ರಕಾಶ್ ಗೆ ಮಾಹಿತಿ ಇಲ್ಲದಿರಬಹುದು, ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ. ಈ ಬಗ್ಗೆ ನಾನು, ಸಿಎಂ, ಡಿಸಿಎಂ ಕೊಡುವ ಹೇಳಿಕೆ ಮಾತ್ರ ಅಧಿಕೃತ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಗೃಹ ಸಚಿವರಾದ ನನಗೆ ಹಾಗೂ ಸಿಎಂ ಗೆ ಟೆಕ್ನಿಕಲ್ ಮಾಹಿತಿ ಇರುತ್ತದೆ, ಎಲ್ಲರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ . ಹಲವು ತನಿಖಾ ಸಂಸ್ಥೆಗಳು ಘಟನಾ ಸ್ಥಳ ಪರಿಶೀಲನೆ ನಡೆಸಿವೆ ಎಂದು ತಿಳಿಸಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.