ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐ ಎ ಅಧಿಕಾರಿಗಳು ಚೆನ್ನೈ ನಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ತನಿಖಾ ದಳ ಚೆನ್ನೈಯಲ್ಲಿ ದಾಳಿ ನಡೆಸಿದ್ದು, ಚೆನ್ನೈನ ಸಿದ್ದಾಯಳ್ ಪೇಟೆ ಮತ್ತು ಬಿಡಾರಿಯಾರ್ ಟೆಂಪಲ್ ಬಳಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ ಇನ್ಪಾರ್ಮರ್ ಗಳು ನೀಡಿದ ಮಾಹಿತಿ ಮೇರೆಗೆ ಚೆನ್ನೈಯಲ್ಲಿ ಐವರನ್ನು ಎನ್ ಐ ಎ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡಗಳು ಮಂಗಳವಾರ ಬೆಳಿಗ್ಗೆ ಚೆನ್ನೈ ಮತ್ತು ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ಶೋಧ ಪ್ರಾರಂಭಿಸಿದೆ. ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.