
ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ ಮತ್ತೆ ಪರಿಶೀಲನೆ ನಡೆಸಿದೆ.
ರಾಮೇಶ್ವರಂ ಕೆಫೆಯಲ್ಲಿ ಮಾ.1ರಂದು ಮಧ್ಯಾಹ್ನ ಬಾಂಬ್ ಸ್ಫೋಟ ನಡೆದಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಎನ್ ಐಎ ತನಿಖೆಗೆ ವರ್ಗಾವಣೆ ಮಾಡಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಶಂಕಿತನ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.
ಈ ನಡುವೆ ಎಫ್ ಎಸ್ ಎಲ್ ತಂಡದ ಅಧಿಕಾರಿಗಳು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಮರುಪರಿಶೀಲನೆ ನಡೆಸಿದ್ದಾರೆ. ಕೆಳಗೆ ಬಿದ್ದಿರುವ ಗಾಜು ಸೇರಿದಂತೆ ಪ್ರತಿಯೊಂದು ವಸ್ತುವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.