ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದು, ಬಾಂಬರ್ ಪುಣೆಯಲ್ಲಿರುವ ಅಡಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಬಾಂಬ್ ಸ್ಪೋಟದ ಬಾಂಬರ್ ಈಗ ಪುಣೆಯಲ್ಲಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದೆ. ಈ ನಿಟ್ಟಿನಲ್ಲಿ ಎನ್ ಐ ಎ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಇಂದು ಆರೋಪಿಯ ಕ್ಲಾರಿಟಿ ಫೋಟೋ ಬಿಡುಗಡೆಯಾಗಿದ್ದು, ಸದ್ಯ ಎನ್ ಐ ಎ ಅಧಿಕಾರಿಗಳು ಹೆಣೆದ ಬಲೆಗೆ ಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆ ಚುರುಕುಗೊಳಿಸಿದೆ. ಪ್ರಕರಣದ ಹಿಂದೆ ಐಸಿಸ್ ಉಗ್ರರ ನಂಟಿರುವ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ. ಶಂಕಿತರು ಪರಾರಿಯಾಗಲು ಸಮುದ್ರ ಮಾರ್ಗವನ್ನು ಬಳಕೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.