ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಬಗ್ಗೆ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷಾತೀತವಾಗಿ ಜನರು ಪರಸ್ಪರ ಭೇಟಿಯಾಗುತ್ತಾರೆ. ಸಮಾರಂಭಗಳಿಗೆ ಹೋಗುತ್ತಾರೆ. ಕೆಲವು ಕುಟುಂಬಗಳಲ್ಲಿ ಮದುವೆಗಳು ಕೂಡ ನೆರವೇರಿವೆ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿದೆ. ಎಂ.ಬಿ. ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ. ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.