ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ.
ಮಂಗಳವಾರ ರಾತ್ರಿ ರಂಜಾನ್ ತಿಂಗಳ ಮೊದಲ ಚಂದ್ರ ದರ್ಶನ ಆಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೇರಳ ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ನಾಳೆಯಿಂದ ಪವಿತ್ರ ರಂಜಾನ್ ಮಾಸದ ಉಪವಾಸ ಆರಂಭವಾಗಲಿದೆ ಎಂದು ಹೇಳಲಾಗಿದೆ.