alex Certify BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ.

ಪ್ರಾರ್ಥನೆಗೆ ಐದು ನಿಮಿಷ ಮೊದಲು ಮಸೀದಿ ಓಪನ್ ಮಾಡಬೇಕು. ಕಂಟೈನ್ಮೆಂಟ್ ಜೋನ್ ಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು. ನಮಾಜ್ ಮಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಪ್ರತಿದಿನದ ಇಫ್ತಿಯಾರ್ ಕೂಟಕ್ಕೆ ಅವಕಾಶ ಇರುವುದಿಲ್ಲ. ಮನೆಯಲ್ಲಿಯೇ ಇಫ್ತಿಯಾರ್ ಕೂಟ ಆಯೋಜಿಸಬಹುದು. ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿರುತ್ತದೆ. ಮಸೀದಿಗೆ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಬೇಕು. ಪ್ರಾರ್ಥನೆಗೆ ಸ್ವಂತ ಜಮಖಾನ ಮಾತ್ರ ಬಳಸಬೇಕು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನಲೆಯಲ್ಲಿ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ ನಲ್ಲಿರುವ ಮಸೀದಿಗಳನ್ನು ಮುಂದಿನ ಆದೇಶದವರೆಗೆ ಬಂದ್ ಮಾಡಿರಬೇಕು. ಉಳಿದ ಮಸೀದಿಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ. ಉಪವಾಸ ಬಿಡುವಾಗ ಮಸೀದಿಗೆ ಆಹಾರ ತರಬಾರದು. ಉಪವಾಸವನ್ನು ಮನೆಯಲ್ಲಿಯೇ ಬಿಡಬೇಕೆಂದು ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...