![](https://kannadadunia.com/wp-content/uploads/2022/09/Randeep-Surjewala-Congress.jpg)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ಪರ್ವ ಆರಂಭವಾದಂತಿದೆ. ಶೀಘ್ರದಲ್ಲಿಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸ್ಥಾನದಿಂದ ಬದಲಿಸುವಂತೆ ರಣದೀಪ್ ಸಿಂಗ್ ಸುರ್ಜೇವಾಲ ಎಐಸಿಸಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ರಣದೀಪ್ ಸಿಂಗ್ ಸುರ್ಜೇವಾಲ ಸ್ಥಾನಕ್ಕೆ ನೂತನ ಉಸ್ತುವಾರಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ.
ರಣದೀಪ್ ಸಿಂಗ್ ಸುರ್ಜೇವಾಲ ಹರಿಯಾಣ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನ ಬದಲಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಒಂದೊಮ್ಮೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ರಣದೀಪ್ ಸಿಂಗ್ ಸುರ್ಜೇವಾಲ ಬದಲಾದರೆ ತೆರವಾದ ಸ್ಥಾನಕ್ಕೆ ಛತ್ತೀಸ್ ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.