ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಧುನಿಕ ಶಕುನಿ ಎಂದು ಕರೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಪ್ರಕೃಷ್ಟ ವತಿಯಿಂದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ.
ಅದೇ ರೀತಿ ುಜ್ಯವಾಲ ಅವರು ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಆರ್‌ಬಿಐ ದಂಡ ವಿಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಿರುಪತಿ ದೇವಾಲಯದ ಮೇಲೆ ದಾಳಿ ಮಾಡಿಸಿದೆ ಎಂದು ಹೇಳಿಕೆ ನೀಡಿರುವ ಬಗ್ಗೆಯೂ ಸುರ್ಜೆವಾಲಾ ಅವರ ವಿರುದ್ಧ ಪ್ರತ್ಯೇಕ ದೂರು ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಧುನಿಕ ಶಕುನಿ. ಮೀಸಲಾತಿ ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದು, ಈ ಮೂಲಕ ಮುಖ್ಯಮಂತ್ರಿಗಳ ಗೌರವಕ್ಕೆ ಚ್ಯುತಿ ತರುವಂತಹ ಹೇಳಿಕೆ ನೀಡಿ ಸಮಾಜದಲ್ಲಿ ಅವರ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅವಹೇಳನಕಾರಿ ಹೇಳಿಕೆ ನೀಡಿ ಪಕ್ಷದ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಿ ಕೆರಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.
ಅದೇ ರೀತಿ ತಿರುಪತಿ ದೇವಾಲಯಕ್ಕೆ ಆರ್.ಬಿ.ಐ. ದಂಡ ವಿಧಿಸಿರುವುದನ್ನು ಸುಳ್ಳು ಆರೋಪ ಮಾಡಿ ಮೋದಿ ಸರ್ಕಾರ ತಿರುಪತಿ ದೇವಾಲಯದ ಮೇಲೆ ದಾಳಿ ನಡೆಸಿದೆ ಎಂದು ಸುರ್ಜೇವಾಲಾ ಜನರ ಧಾರ್ಮಿಕ ಭಾವನೆ ಕೆರಳುವಂತೆ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.