
ಹುಬ್ಬಳ್ಳಿ: ಬಿಜೆಪಿ ಚರಿತ್ರೆ ದ್ರೋಹದ ಮೇಲೆ ಅವಲಂಬಿತವಾಗಿದೆ. ಬಿಜೆಪಿಯವರು ಕಪಟರು, ದ್ರೋಹಿಗಳು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಮಹಾದಾಯಿ ಜಲ ಜನ ಆಂದೋಲನದಲ್ಲಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಸುಳ್ಳಿನ ವಿಜಯೋತ್ಸವ ಮಾಡುತ್ತಿದ್ದಾರೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ಯೋಜನೆಗೆ ಅಡ್ಡಗಾಲು ಹಾಕಿದ್ದರು. ಎರಡು ದಿನದ ಹಿಂದೆ ಕಳಸ ಯೋಜನೆಗೆ ಅರಣ್ಯ ಇಲಾಖೆಗೆ ಪತ್ರ ಬರೆಯುತ್ತಾರೆ. ಕಳಸ ಬಂಡೂರಿ ಯೋಜನೆ ಬಗ್ಗೆ ಬಿಜೆಪಿಯವರು ತಲೆ ಕೆಡಿಸಿಕೊಂಡಿಲ್ಲ. ಬಿಜೆಪಿಯಿಂದ ಮಹದಾಯಿ ನೀರು ತರಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.
ನಿಮ್ಮ ಆಶೀರ್ವಾದ ದೊರೆತಲ್ಲಿ ಮಹದಾಯಿ ಯೋಜನೆ ಜಾರಿಗೆ ತರುತ್ತೇವೆ. ಅಧಿಕಾರಕ್ಕೆ ಬಂದರೆ ಮೊದಲ ಸಂಪುಟದಲ್ಲೇ ಯೋಜನೆ ಜಾರಿ ನಿರ್ಣಯ ಕೈಗೊಳ್ಳುತ್ತೇವೆ. ಮಹದಾಯಿ ಯೋಜನೆಗೆ 3000 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.