
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯೆ ನೀಡಿದ್ದು, ಸುದೀಪ್ ಅವರ ಜಾಹೀರಾತುಗಳಿಗೆ ಚುನಾವಣಾ ಆಯೋಗ ನಿರ್ಬಂಧ ಹೇರಲಿ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಮಾವೇಶಗಳಲ್ಲಿ ಖಾಲಿ ಕುರ್ಚಿಗಳನ್ನು ನೋಡಬಹುದಾಗಿದೆ. ಹೀಗಾಗಿ ಸಿನಿಮಾ ನಟರನ್ನು ಚುನಾವಣಾ ಪ್ರಚಾರಕ್ಕೆ ಕರೆತರುತ್ತಿದ್ದಾರೆ. ಸಿನಿಮಾ ಬೇರೆ, ರಾಜಕೀಯವೇ ಬೇರೆ. ಹಾಲಿವುಡ್, ಬಾಲಿವುಡ್, ಬಾಲಿವುಡ್ ನಟರನ್ನು ಕರೆತಂದು ಬಿಜೆಪಿಯವರು ಪ್ರಚಾರ ನಡೆಸಲಿ. ನಮಗೆ ರಾಜ್ಯದ ಜನರ ಹಿತ ಮುಖ್ಯ ಎಂದು ಹೇಳಿದ್ದಾರೆ.