ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ.
ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ವೈರಸ್‌ಗಾಗಿ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.
ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಒಮಿಕ್ರಾನ್ ಸಬ್‌ವೇರಿಯಂಟ್ BF.7 ನ ಮೂರು ಪ್ರಕರಣಗಳು, ಚೀನಾದ ಪ್ರಸ್ತುತ ಕೋವಿಡ್ ಪ್ರಕರಣಗಳ ಉಲ್ಬಣ ಹಿನ್ನಲೆಯಲ್ಲಿ ಒತ್ತಡ ಹೆಚ್ಚಾಗಿದೆ. ಕೋವಿಡ್ -19 ಇನ್ನೂ ಮುಗಿದಿಲ್ಲ. ಸಂಬಂಧಿಸಿದ ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಗಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಮಾಂಡವಿಯಾ ಹೇಳಿದ್ದಾರೆ.