alex Certify ಚೀನಾ ಸೇರಿ ವಿದೇಶಗಳಲ್ಲಿ ಕೊರೋನಾ ಹೆಚ್ಚಳ, ಭಾರತದಲ್ಲೂ 3 BF.7 ಕೇಸ್ ಬೆನ್ನಲ್ಲೇ ಟಫ್ ರೂಲ್ಸ್: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾ ಸೇರಿ ವಿದೇಶಗಳಲ್ಲಿ ಕೊರೋನಾ ಹೆಚ್ಚಳ, ಭಾರತದಲ್ಲೂ 3 BF.7 ಕೇಸ್ ಬೆನ್ನಲ್ಲೇ ಟಫ್ ರೂಲ್ಸ್: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ವೈರಸ್‌ಗಾಗಿ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.

ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಒಮಿಕ್ರಾನ್ ಸಬ್‌ವೇರಿಯಂಟ್ BF.7 ನ ಮೂರು ಪ್ರಕರಣಗಳು, ಚೀನಾದ ಪ್ರಸ್ತುತ ಕೋವಿಡ್ ಪ್ರಕರಣಗಳ ಉಲ್ಬಣ ಹಿನ್ನಲೆಯಲ್ಲಿ ಒತ್ತಡ ಹೆಚ್ಚಾಗಿದೆ. ಕೋವಿಡ್ -19 ಇನ್ನೂ ಮುಗಿದಿಲ್ಲ. ಸಂಬಂಧಿಸಿದ ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಗಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಮಾಂಡವಿಯಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...