ದುಬೈನಲ್ಲಿರುವ ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಜೀವನಕಥೆ ಆಧರಿತ ಚಿತ್ರ ’83’ಯ ಝಲಕ್‌ಗಳನ್ನು ಪ್ರೊಜೆಕ್ಟ್ ಮಾಡಲಾಗಿದೆ.
ಚಿತ್ರದ ನಟರಾದ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಜೊತೆಗೆ ಕ್ರಿಕೆಟ್ ತಾರೆಯರಾದ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಹಾಗೂ ಮೋಹಿಂದರ್ ಅಮರ್‌ನಾಥ್ ಈ ದೃಶ್ಯಕಾವ್ಯಕ್ಕೆ ಸಾಕ್ಷಿಯಾಗಿದ್ದಾರೆ.
ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್
ಈ ಇವೆಂಟ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚಿತ್ರದ ಬಿಡುಗಡೆಗೆ ಇದ್ದ ಕಾತರವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರವು ಏಕಕಾಲದಲ್ಲಿ ಕನ್ನಡ, ಹಿಂದಿ, ತೆಲುಗು, ಮಲಯಾಳಂಗಳಲ್ಲಿ ಬಿಡುಗಡೆಯಾಗಲಿದೆ.
https://www.youtube.com/watch?v=RcPAxQ-js8I&feature=youtu.be