alex Certify BREAKING : ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್.!

ಬೆಂಗಳೂರು: ಹಣ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೀಪಕ್ ಬಂಧಿತ ಆರೋಪಿ. ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿ. ಈತ ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ. ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪ ದೀಪಕ್ ಮೇಲಿದೆ. ಈ ಹಿನ್ನೆಲೆಯಲ್ಲಿ ದೀಪಕ್ ನನ್ನು ಬಂಧಿಸಲಾಗಿದೆ.

ಇನ್ನು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೂ ದೀಪಕ್ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...