
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಕ್ಕೀದಾಗಿರುವ ನತಿ ರನ್ಯಾ ರಾವ್ ಕೇಸ್ ನಲ್ಲಿ ಐಪಿಎಸ್ ಅದಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಗೌರವ್ ಗುಪ್ತಾ ಸಮಿತಿ ರಚನೆ ಮಾಡಿದೆ.
ರನ್ಯಾ ರಾವ್ ಐಪಿಎಸ್ ಅಧಿಕಾರಿ ರಾಮಚಮ್ದ್ರ ರಾವ್ ಹೆಸರು ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಗೌರವ್ ಗುಪ್ತಾ ಸಮಿತಿ ರಚಿಸಿ, ತನಿಖೆಗೆ ಆದೇಶ ನೀಡಿದೆ.
ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಹೆಸರನ್ನು ಬಳಸಿ ರನ್ಯಾ ರಾವ್ ಏರ್ ಪೋರ್ಟ್ ಗಳಲ್ಲಿ ತಮಗೆ ನೀಡುವ ಶಿಷ್ಠಾಚಾರ ನಿಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈ ಮೂಲಕ ತಪಾಸಣೆಯಿಂದ ತಪ್ಪಿಸಿಕೊಂಡು ಅಕ್ರಮ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸಲಾಗಿದೆ.