
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.
ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಜಾಮೀನಿಗಾಗಿ ನಟಿ ರನ್ಯಾ ರಾವ್ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿ ಆದೇಶ ಹೊರಡಿಸಿದೆ.